HomeKarnatakaಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ಸೊರಬ ತೋಟಗಾರಿಕೆ ಇಲಾಖೆ ವತಿಯಿಂದ 2026-27 ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡಲು ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.90 ರಂತೆ ಮೊದಲ 2.00 ಹೆಕ್ಟೆರ್ ವರೆಗೆ ಸಹಾಯಧನವನ್ನು ನೀಡಲಾಗುವುದು. 2.00 ಹೆಕ್ಟೆರ್ ಮೇಲ್ಪಟ್ಟ ಪ್ರದೇಶಕ್ಕೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು. (ಗರಿಷ್ಠ 5 ಹೆಕ್ಟೆರ್) ಇಲಾಖೆಯಿಂದ ಅನುಮೋದನೆಗೊಂಡ ಕಂಪನಿಗಳ ಮೂಲಕವೇ ರೈತರು ಸೂಕ್ಷ್ಮ ನೀರಾವರಿ ಘಟಕವನ್ನು ಅಳವಡಿಸಿಕೊಳ್ಳತಕ್ಕದ್ದು.

ನೊಂದಣಿ ಅರ್ಜಿಗಳನ್ನು ದಾಖಲಾತಿಗಳ ಸಹಿತ ಸಲ್ಲಿಸಲು ಕೊನೆಯ ದಿನಾಂಕ:15/10/2026 ಆಗಿರುತ್ತದೆ. ಕಾಲಕಾಲಕ್ಕೆ ಪರಿಷ್ಕರಿಸುವ ಮಾರ್ಗಸೂಚಿ, ಅನುಧಾನ ಲಭ್ಯತೆ ಹಾಗೂ ಕಾರ್ಯಾದೇಶ ನೀಡಿದ ನಂತರದ ಜೇಷ್ಠತೆ ಅನುಸಾರ ಸಹಾಯಧನ ಒದಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ಸೂಚನೆ: ರೈತರ ವಂತಿಕೆಯನ್ನು ಅನುಮೋದಿತ ಕಂಪನಿಯವರ ಬ್ಯಾಂಕ್ ಖಾತೆಗೆ ರೈತರ ಖಾತೆಯಿಂದ ಡಿಜಿಟಲ್ ಪೇಮೆಂಟ್ ಮುಖಾಂತರ ಪಾವತಿಸತಕ್ಕದ್ದು. ಯಾವುದೇ ಕಾರಣಕ್ಕೂ ನಗದು ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.

ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತೋಟಗಾರಿಕೆ ಇಲಾಖೆ ಸೊರಬ ಕಛೇರಿಯನ್ನು ಸಂಪರ್ಕಿಸುವಂತೆ ಸೊರಬದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 ಅಕ್ಟೋಬರ್ 1 ರಂದು ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮ

 ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಶಿವಮೊಗ್ಗ ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

 ಈ ಬಾರಿಯ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಘೋಷ ವಾಕ್ಯ “ದೀರ್ಘಾಯುಷ್ಯದ ಯುಗ : ಸುದೀರ್ಘ ಜೀವನಕ್ಕಾಗಿ ಜೀವನ ಕ್ರಮಗಳ ಮರುಚಿಂತನೆ” ಎಂಬುದಾಗಿದೆ. ಕಾರ್ಯಕ್ರಮವು ದಿನಾಂಕ: 01-10-2026 ರ ಗುರುವಾರ ಬೆಳಿಗ್ಗೆ 10-00 ಗಂಟೆಗೆ ನಗರದ ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದ್ದು, ಈ ವಿಶೇಷ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿನಂತಿಸಿದ್ದಾರೆ

 ಮಹಾರಾಷ್ಟ್ರದ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

 ಶಿವಮೊಗ್ಗ:  ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿರುವ ಪವಿತ್ರ ‘ದೀಕ್ಷಾ ಭೂಮಿ’ಗೆ ಭೇಟಿ ನೀಡಲು ಬಯಸುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ಆಸಕ್ತರಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 ಅರ್ಜಿಯನ್ನು ವೆಬ್‌ಸೈಟ್ ಲಿಂಕ್: http://swdservices.karnataka.gov.in/ ಮೂಲಕ ದಿನಾಂಕ: 09.10.2026 ರೊಳಗೆ ಸಲ್ಲಿಸಬೇಕು. ಆಸಕ್ತ ಅರ್ಹ ಯಾತ್ರಾರ್ಥಿಗಳು ನಿಗದಿತ ದಿನಾಂಕದೊಳಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವರು ಕೋರಿದ್ದಾರೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular