HomeKarnatakaBIG NEWS: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

BIG NEWS: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ರಾಘವೇಂದ್ರ ಮಠ, ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು. ಬಳಿಕ ಧಾರವಾಡದ ಶಿವಾಜಿ ಸರ್ಕಲ್ ನಿಂದ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಭವಾನಿ ನಗರದಲ್ಲಿರುವ ಅವರ ಮನೆಯನ್ನು ಹೂವಿನಿಂದ ಅಲಂಕಾರ ಮಾಡಲಾಗಿದೆ. ನಾಮಪತ್ರ ಸಲಿಕೆ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ, ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular