HomeKarnatakaBIG NEWS: ಗ್ಯಾರಂಟಿ ಯೋಜನೆ ನಿಭಾಯಿಸಲು ಇಂದಿರಾ ಕ್ಯಾಂಟೀನ್ ಗಳಿಗೆ ಬೀಗ: ಕೇಂದ್ರ ಸಚಿವ ಪ್ರಹ್ಲಾದ್...

BIG NEWS: ಗ್ಯಾರಂಟಿ ಯೋಜನೆ ನಿಭಾಯಿಸಲು ಇಂದಿರಾ ಕ್ಯಾಂಟೀನ್ ಗಳಿಗೆ ಬೀಗ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಂಗ್ರೆಸ್ ಬಡವರ ಪರ ಎನ್ನುತ್ತ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ. ನಿಜವಾಗಿ ಸರ್ಕಾರಕ್ಕೆ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ನವರು ಓಲೈಸಿಕೊಳ್ಳಲು ಬಣ್ಣ ಬಣ್ಣದ ಕಥೆ ಕಟ್ಟಿ ರಾಜಕಾರಣ ಮಾಡುತ್ತಾರೆ. ಬಡವರ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಕಾಂಗ್ರೆಸ್ ಸರ್ಕಾರವೇ ಮುಚ್ಚುತ್ತಿದೆ. ಬಡವರು ಮತ್ತು ಶ್ರಮಿಕ ವರ್ಗದವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಚ್ಚಿಸಲು ಹೊರಟಿತ್ತು ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಆದರೆ, ಈಗ ಕಾಂಗ್ರೆಸ್ ಸರ್ಕಾರವೇ ಮುಚ್ಚಲು ಹೊರಟಿದೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿ ಯೋಜನೆ ನಿಭಾಯಿಸಲಾಗದೆ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿದ್ದ ಹಣಕ್ಕೂ ಕೈ ಹಾಕಿರುವ ಕಾಂಗ್ರೆಸ್ ಸರ್ಕಾರ, ಈಗ ಇಂದಿರಾ ಕ್ಯಾಂಟಿನ್ ಗಳಿಗೆ ಬೀಗ ಹಾಕುತ್ತಿದೆ ಎಂದಿದ್ದಾರೆ.

ಇಂದಿರಾ ಕ್ಯಾಂಟಿನ್ ಗಳಿಗೆ ಕಳೆದೊಂದು ವರ್ಷದಿಂದ ಆಹಾರ ಪೂರೈಸುತ್ತಿದ್ದ ಗುತ್ತಿಗೆದಾರರಿಗೆ ಬರೋಬ್ಬರಿ 47 ಕೋಟಿ ರೂ. ಬಿಲ್ ಪಾವತಿಸಲಾಗದೆ ಬಾಗಿಲು ಮುಚ್ಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular