HomeLatest Newsಕೋಗಿಲು ಅತಿಕ್ರಮಣದಾರರಿಗೆ ಕೇವಲ 2 ದಿನಗಳಲ್ಲಿ ಪರ್ಯಾಯ ವ್ಯವಸ್ಥೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಶರವೇಗ: ಬರ,...

ಕೋಗಿಲು ಅತಿಕ್ರಮಣದಾರರಿಗೆ ಕೇವಲ 2 ದಿನಗಳಲ್ಲಿ ಪರ್ಯಾಯ ವ್ಯವಸ್ಥೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಶರವೇಗ: ಬರ, ಪ್ರವಾಹ ಸಂತ್ರಸ್ಥರಿಗೆ ವರ್ಷ ಕಳೆದರೂ ಸಿಗದ ಪರಿಹಾರ: ಪ್ರಹ್ಲಾದ್ ಜೋಶಿ ಆಕ್ರೋಶ

ನವದೆಹಲಿ: ಬೆಂಗಳೂರಿನ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ “ತುಷ್ಟೀಕರಣದ ಶರವೇಗ” ವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ರೈತರು, ಬೆಳೆಹಾನಿ ಸಂತ್ರಸ್ತರು ಮತ್ತು ಇತರೆ ನಿರಾಶ್ರಿತರು ಪರ್ಯಾಯ ವ್ಯವಸ್ಥೆ ಹಾಗೂ ಪರಿಹಾರಕ್ಕಾಗಿ ವರ್ಷಾನುಗಟ್ಟಲೆ ಕಾಯುತ್ತಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳೂ ಗ್ಯಾರೆಂಟಿ ನಿಧಿಗಾಗಿ ಕಾಯುತ್ತಿದ್ದಾರೆ. ಆದರೆ, ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಮಾತ್ರ ಕ್ಷಣಾರ್ಧದಲ್ಲಿ ಪರಿಹಾರ, ಪರ್ಯಾಯ ವ್ಯವಸ್ಥೆಗೆ ಮುಂದಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಮಿತಿಮೀರಿದ “ಧರ್ಮ ಓಲೈಕೆ” ಆಡಳಿತವನ್ನು ಪ್ರದರ್ಶಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇನ್ನು ಕೋಗಿಲು ಅತಿಕ್ರಮಣದಾರರಿಗೆ ಮನೆ ಕಟ್ಟಿಕೊಳ್ಳಲು ನೆರವು ನೀಡುವುದಾಗಿ ಸಹ ಘೋಷಿಸಿದ್ದು, ಪ್ರತಿಯೊಂದು ಮನೆ 8 ರಿಂದ 11 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವಂತಿದ್ದು, ಸಾಲ ಮತ್ತು ಸಬ್ಸಿಡಿ ನೀಡುವುದಾಗಿ ಹೇಳಿದ್ದು, ಇದೊಂದು ಬಾರಿ ಪರಿಹಾರ ಕಲ್ಪಿಸಲಾಗುತ್ತದೆ ಎಂದಿರುವುದು ವಿಪರ್ಯಾಸ. ಸರ್ಕಾರದ್ದು ಅದ್ಯಾವ ರೀತಿಯ ಪರಿಹಾರ ಕ್ರಮ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೇವಲ ಒಂದು ಧರ್ಮದ ಓಲೈಕೆಯಲ್ಲೇ ಮುಳುಗಿದೆ. ತುಷ್ಟೀಕರಣಕ್ಕಾಗಿ ಶರವೇಗದಲ್ಲಿ ಪರಿಹಾರ ಕ್ರಮ ಕೈಗೊಂಡಿದೆ. ಅಲ್ಲದೇ, ಔಪಚಾರಿಕ ಪರಿಹಾರ ನೀಡಲು ಮುಂದಾಗಿದ್ದು, ಅತಿ ಬೇಸರದ ಸಂಗತಿ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬರ, ಪ್ರವಾಹದಂತಹ ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಪಡೆಯಲು ರಾಜ್ಯದ ಸಂತ್ರಸ್ತರು ವರ್ಷಗಳಿಂದ ಕಾಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ಎರಡು ದಿನಗಳಲ್ಲಿ ಪರಿಹಾರ ಒದಗಿಸಿ ತನ್ನ ಧರ್ಮಾಧಾರಿತ ಆಡಳಿತವನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ.

ಪಕ್ಕದ ರಾಜ್ಯದ ಕಾಂಗ್ರೆಸ್ ನಾಯಕರೊಬ್ಬರು ಕರೆ ಮಾಡಿ, ತಕ್ಷಣ ಪರಿಹಾರ ಕ್ರಮಕ್ಕೆ ನಿರ್ದೇಶಿಸಿದ್ದು, ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷದ ನಾಯಕತ್ವದ ಕೈಗೊಂಬೆಯಾಗಿ ವರ್ತಿಸುತ್ತಿದೆ. ತನ್ನ ಆದ್ಯ ಕರ್ತವ್ಯ ಮತ್ತು ಕಾನೂನಿನ ಪರಿಮಿತಿಯ ಜವಾಬ್ದಾರಿಯನ್ನು ಗಾಳಿಗೆ ತೂರಿ, ತುಷ್ಟೀಕರಣ ರಾಜಕಾರಣದ ಪರಮಾವಧಿಯನ್ನು ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ.

ಈ ಸರ್ಕಾರದ ಆಡಳಿತದಲ್ಲಿ ರೈತರು, ನಿಜವಾದ ಸಂತ್ರರು, ಗೃಹಲಕ್ಷ್ಮಿ ಫಲಾನುಭವಿಗಳು ಕಾಯಬೇಕಾದ ಪರಿಸ್ಥಿತಿ ಇದೆಯೇ ವಿನಃ ಅಕ್ರಮವಾಗಿ ಅತಿಕ್ರಮಿಸಿದವರು ಕಾಯುವಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular