HomeKarnatakaಕಾಂಗ್ರೆಸ್ ಹೈಕಮಾಂಡ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ; ಇನ್ನು ಆ ಪಕ್ಷದ ಉಳಿದವರಲ್ಲಿ ಪ್ರಾಮಾಣಿಕತೆ ಸಾಧ್ಯವೇ? ಕೇಂದ್ರ...

ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ; ಇನ್ನು ಆ ಪಕ್ಷದ ಉಳಿದವರಲ್ಲಿ ಪ್ರಾಮಾಣಿಕತೆ ಸಾಧ್ಯವೇ? ಕೇಂದ್ರ ಸಚಿವರ ಪ್ರಶ್ನೆ

ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಭ್ರಷ್ಟಚಾರ ಎನ್ನುವುದು ಕಾಂಗ್ರೆಸ್ ರಕ್ತದಲ್ಲಿಯೇ ಇದೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, 200 ಕೋಟಿ ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಹಿಡಿದ ಕೈಗನ್ನಡಿ. ಕಾಂಗ್ರೆಸ್ ಭ್ರಷ್ಟಾಚಾರ ಮತ್ತೆ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

200 ಕೋಟಿ ರೂ.ಮೌಲ್ಯದ 39,700 ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ಚೀನಾಗೆ ರಫ್ತು ಮಾಡಿದ್ದ ಪ್ರಕರಣವನ್ನು ಸಿಬಿಐ ಭೇದಿಸಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಆ ಪಕ್ಷದ ಉಳಿದ ನಾಯಕರಲ್ಲಿ ಪ್ರಾಮಾಣಿಕತೆ ನಿರೀಕ್ಷಿಸಲು ಸಾಧ್ಯವೇ? ಎಂದು ಜೋಶಿ ವ್ಯಂಗ್ಯವಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಮೂಲಕ ಭ್ರಷ್ಟ ಸರ್ಕಾರದಿಂದ ಜನರನ್ನು ಮುಕ್ತಿಗೊಳಿಸಲಿ ಎಂದು ಆಗ್ರಹಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular