HomeKarnatakaBIG NEWS: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

BIG NEWS: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರ ಖರೀದಿಸಲು ಬಿಜೆಪಿ ಯತ್ನಿಸುತ್ತಿದ್ದೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಖರೀದಿಸಲು ಎಂದು ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ತಮ್ಮ ಮತ್ತು ಸರ್ಕಾರದ ಮೇಲಿರುವ ಆರೋಪಗಳ ವಿಷಯಾಂತರಕ್ಕೆ ಹೀಗೆಲ್ಲ ಮಾತನಾಡುತ್ತಿದ್ದಾರೆ. ಶಾಸಕರ ಸಾರ್ವಜನಿಕ ಬದುಕನ್ನು ಹೀಗೆ ಕಲುಷಿತಗೊಳಿಸೋ ಕೆಲಸವನ್ನು ಮುಖ್ಯಮಂತ್ರಿ ಆದವರು ಮಾಡಬಾರದು ಎಂದರು.

ಬಿಜೆಪಿ 50 ಕೋಟಿ ಆಫರ್ ನೀಡಿದೆ ಎಂದು ಅಥವಾ ಮಧ್ಯವರ್ತಿಯನ್ನು ಹೆಸರಿಸಿ ಕಾಂಗ್ರೆಸ್ಸಿನ ಒಬ್ಬ ಎಂಎಲ್ ಎ ಆದರೂ ಹೇಳಿದ್ದಾರೆಯೇ? ಮುಖ್ಯಮಂತ್ರಿ ಆದವರು ಸ್ವಲ್ಪ ಜವಾಬ್ದಾರಿ ಅರಿತು ಮಾತನಾಡಬೇಕು. ಸಿಎಂ ಹಾಗೂ ಅವರ ತಂಡದ ಆರೋಪ ನೋಡಿದರೆ ಕಾಂಗ್ರೆಸ್ ಶಾಸಕರನ್ನು ಇವರು ಮಾರುಕಟ್ಟೆಯಲ್ಲಿ ಇಟ್ಟಂತೆ ಕಾಣುತ್ತದೆ. ಮಾರುಕಟ್ಟೆಯಲ್ಲಿ ಸಿಗೋದು ಕುರಿ, ಕೋಣ, ಕತ್ತೆಗಳು ಶಾಸಕರಲ್ಲ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಬ್ಬೊಬ್ಬ ಶಾಸಕರಿಗೆ 50 ಕೋಟಿ ಅಂದರೆ 2500 ಕೋಟಿ ರೂಪಾಯಿ ಆಗುತ್ತದೆ. ಸಿಎಂಗೆ ಸ್ವಲ್ಪವಾದರೂ ಸೆನ್ಸ್ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular