HomeKarnatakaಜನಕಲ್ಯಾಣ ಮರೆತು ರಾಜಕೀಯ ದೊಂಬರಾಟದಲ್ಲಿ ತೊಡಗಿರುವ ರಾಜ್ಯ ಸರ್ಕಾರ: ಸಿಎಂ, ಡಿಸಿಎಂ ಆತ್ಮಾವಲೋಕನ ಮಾಡಿಕೊಳ್ಳಲಿ; ಕೇಂದ್ರ...

ಜನಕಲ್ಯಾಣ ಮರೆತು ರಾಜಕೀಯ ದೊಂಬರಾಟದಲ್ಲಿ ತೊಡಗಿರುವ ರಾಜ್ಯ ಸರ್ಕಾರ: ಸಿಎಂ, ಡಿಸಿಎಂ ಆತ್ಮಾವಲೋಕನ ಮಾಡಿಕೊಳ್ಳಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಕಲ್ಯಾಣ ಮರೆತಿದೆ. ರಾಜಕೀಯ ದೊಂಬರಾಟದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜನಕಲ್ಯಾಣ, ರಾಜ್ಯದ ಅಭಿವೃದ್ಧಿಯನ್ನು ಮರೆತು ತಮ್ಮ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಜನರು 136 ಸೀಟುಗಳನ್ನು ಕೊಟ್ಟು ಕಾಂಗ್ರೆಸ್ ನ್ನು ಗೆಲ್ಲಿಸಿದ್ದಾರೆ. ಆದರೆ ಆಡಳಿತದ ಅವಧಿಯಲ್ಲಿ ಜನ ಕಲ್ಯಾಣ ಬಿಟ್ಟು ನೀವು ರೀತಿ ನಡೆದುಕೊಳ್ಳುತ್ತಿದ್ದೀರಿ ಎಂಬಿದನ್ನು ಸಿಎಂ, ಡಿಸಿಎಂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಮಳೆ ಹಾನಿ, ಬೆಳೆ ಹಾನಿಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ. ಕೇಂದ್ರ ಸರ್ಕಾರ ಹೆಸರು, ಸೂರ್ಯಕಾಂತಿ, ಉದ್ದು, ಸೋಯಾಬಿನ್ ಅನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ತ್ವರಿತ ಅನುಮತಿ ನೀಡಿದರೂ ರಾಜ್ಯದಲ್ಲಿ ಖರೀದಿ ಕೇಂದ್ರದ ಸೂಕ್ತ ತಯಾರಿಯನ್ನೇ ಮಾಡಿಕೊಳ್ಳಲಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular