HomeKarnatakaBIG NEWS: ಪ್ರಜ್ವಲ್ ರೇವಣ್ಣನೂ ಅರೆಸ್ಟ್ ಆಗಲೇಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

BIG NEWS: ಪ್ರಜ್ವಲ್ ರೇವಣ್ಣನೂ ಅರೆಸ್ಟ್ ಆಗಲೇಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರೂ ಅರೆಸ್ಟ್ ಆಗಲೇಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಕಿಡ್ನ್ಯಾಪ್ ಕೇಸ್ ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಬಂಧನವಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನೂ ಬಂಧಿಸಿ ತನಿಖೆ ನಡೆಸಬೇಕು ಎಂದರು.

ಪ್ರಜ್ವಲ್ ರೇವಣ್ಣ ಅವರೂ ಅರೆಸ್ಟ್ ಆಗಬೇಕು. ಅವರನ್ನು ಬಂಧಿಸಿ ಸರಿಯಾದ ತನಿಖೆಗೊಳಪಡಿಸಬೇಕು. ಹಲವಾರು ಮಹಿಳೆಯರು ಪ್ರಜ್ವಲ್ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ. ತಸ್ಥರ ವಿರುದ್ಧ ಕ್ರಠಿಣ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular