HomeKarnatakaBIG NEWS: ಹಾಲಿಸಂಸದರಿಗೆ ಟಿಕೆಟ್ ಕೈತಪ್ಪುತ್ತೆ ಎಂಬುದು ಊಹಾಪೋಹ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

BIG NEWS: ಹಾಲಿಸಂಸದರಿಗೆ ಟಿಕೆಟ್ ಕೈತಪ್ಪುತ್ತೆ ಎಂಬುದು ಊಹಾಪೋಹ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಹೈಕಮಾಂಡ್ ಕೆಲ ಹೊಸಬರಿಗೆ ಕಣಕ್ಕಿಳಿಸುವ ಸಾಧ್ಯತೆ ಇದೆ. ಅಲ್ಲದೆ ಮೈಸೂರಿನಿಂದ ಯದುವೀರ್ ಒಡೆಯರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದ್ದು, ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಾಲಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುತ್ತದೆ ಎಂಬುದು ಕೇವಲ ಊಹಾಪೋಹ. ಇಂತಹ ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ ಎಂದರು.

ಎರಡು ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ. 8 ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ ಎಂದರು. ಇನ್ನು ಹಾವೇರಿ-ಗದಗ ಟಿಕೆಟ್ ಗಾಗಿ ಬಿ.ಸಿ.ಪಾಟೀಲ್ ಪಟ್ಟು ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಟಿಕೆಟ್ ನಿರ್ಧಾರವಾದ ಬಳಿಕ ರಾಷ್ಟ್ರೀಯ ನಾಯಕರು ಸಮಾಧಾನ ಮಾಡುತ್ತಾರೆ. ಮುಂದಿನ 2-3 ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular