BIG NEWS: ನಾಸೀರ್ ಹುಸೇನ್ ಬೇಷರತ್ ಕ್ಷಮೆಯಾಚಿಸಲಿ; ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮತ್ತು ಬೆಂಬಲಿಗರು ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ ಕಾಂಗ್ರೆಸ್ ಪಾರ್ಟಿಗೆ ಅತ್ಯಂತ ಹತ್ತಿರದವನು. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ನಾಸಿರ್ ಹುಸೇನ್ ಅಕ್ಕ-ಪಕ್ಕದಲ್ಲೇ ಇರುತ್ತಿದ್ದವನು ಎಂಬುದು ಸ್ಪಷ್ಟವಾಗಿದೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ ಹೊರಗಿನವನು ಎಂಬ ಸುಳ್ಳು ಸಾಬೂಬು ಹೇಳಿ ತಪ್ಪಿಸಿಕೊಳ್ಲುವುದು ಬೇಡ. ಕನಿಷ್ಠ ಪಕ್ಷ ಭಾರತದಲ್ಲಿರುವ ಸೌಜನ್ಯಕ್ಕಾದರೂ ಸಾರ್ವಜನಿಕ ಕ್ಷಮೆ ಕೇಳಲೇಬೇಕು. ಕಾಂಗ್ರೆಸ್ ಪಕ್ಷ ಕೂಡ ಕ್ಷಮೆ ಕೇಳಬೇಕು ಒತ್ತಾಯಿಸಿದರು.

ಕ್ಷಮೆ ಕೇಳದಿದ್ದರೆ ಯಾವ ಕಾರಣಕ್ಕೂ ನಾಸೀರ್ ಹುಸೇನ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವುದು ಬೇಡ. ಪಾಕ್ ಪರ ಘೋಷಣೆ ಕೂಗಿದ ಆರೋಪಿಗೆ ನಾಸಿರ್ ಹುಸೇನ್ ಆಶೀರ್ವಾದ ಇದೆ. ಒಳಗೊಳಗೇ ಆತನ ಜೊತೆಗಿದ್ದಾರೆ. ದೇಶದ ಘನತೆ, ಗೌರವ ಮತ್ತು ಅಖಂಡತೆ ವಿಚಾರದಲ್ಲಿ ನಾಸಿರ್‌ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು,‌ ಅಲ್ಲಿವರೆಗೆ ಪ್ರಮಾಣ ವಚನ ಸ್ವೀಕರಿಸಬಾರದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read