HomeKarnatakaBIG NEWS: ಶಾಸಕ ಸ್ಥಾನದಿಂದ ಸತೀಶ್ ಸೈಲ್ ರನ್ನು ತಕ್ಷಣ ವಜಾಗೊಳಿಸಿ: ಕೇಂದ್ರ ಸಚಿವ ಪ್ರಹ್ಲಾದ್...

BIG NEWS: ಶಾಸಕ ಸ್ಥಾನದಿಂದ ಸತೀಶ್ ಸೈಲ್ ರನ್ನು ತಕ್ಷಣ ವಜಾಗೊಳಿಸಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕರಣವಾಗಿರುವ ಹಿನ್ನೆಲೆಯಲಿ ತಕ್ಷಣ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸತೀಶ್ ಸೈಲ್ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಸ್ಪೀಕರ್ ಅವಜಾಗೊಳಿಸಬೇಕು ಹಾಗೂ ಚುನಾವಣೆ ಘೋಷಿಸಬೇಕು ಎಂದರು.

ಇನ್ನು ಕಾಂಗ್ರೆಸ್ ನ ಕೆಲ ನಾಯಕರು ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್ ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದು ಈಗಲಾದರೂ ಅರ್ಥವಾಗಿರಬೇಕು. ಕಾಂಗ್ರೆಸ್ ಪಕ್ಷವ್ ಭ್ರಷ್ಟರ ಪಕ್ಷ ಎಂಬುದಕ್ಕೆ ಈ ಪ್ರಕರಣ ಕೂಡ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular