BIG NEWS: ಮೋದಿ ಎಂದು ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯುವ ಶಕ್ತಿ ಕಾಂಗ್ರೆಸ್ ‘ಕೈ’ ಗೆ ಇದೆಯೇ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

ಹುಬ್ಬಳ್ಳಿ: ಮೋದಿ ಮೋದಿ ಎಂದು ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಕಿಡಿಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ ಅವರನ್ನು ಬೆಂಬಲಿಸುವ ಯುವಪಡೆಗೆ ಕಪಾಳ ಮೋಕ್ಷ ಮಾಡುವ ಶಕ್ತಿ ಕಾಂಗ್ರೆಸ್ ಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಆಸ್ತಿ. ಈ ದೇಶದ ಪರಿವಾರಕ್ಕೆ ಸೇರಿದವರು. ದೇಶವಾಸಿಗಳ ಆರಕ್ಷಕರು. ಅದಕ್ಕಾಗಿ ಜನರೇ ಮೋದಿಯವರಿಗೆ ಜೈಕಾರ ಕೂಗುತ್ತಿದ್ದಾರೆ. ಹೀಗಿರುವಾಗ ಅವರೆಲ್ಲರ ಕಪಾಳಕ್ಕೆ ಹೊಡೆಯುವ “ಶಕ್ತಿ” ಕಾಂಗ್ರೆಸ್ “ಕೈ”ಗಿದೆಯೇ? ಎಂದು ಕೇಳಿದ್ದಾರೆ?

ಮೋದಿಯವರಿಗೆ ಜೈಕಾರ ಹಾಕುವವರ ಕಪಾಳಕ್ಕೆ ಹೊಡೆಯಬೇಕೆ? ಯಾವ ಕಾರಣಕ್ಕೆ? ಭಾರತದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಕ್ಕಾಗಿಯೇ? ಅಥವಾ ಜನರ ಒಳಿತಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಕ್ಕಾಗಿಯೇ? ಎಂದು ಕಾಂಗ್ರೆಸ್ಸಿಗರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಪ್ರಧಾನ ಮಂತ್ರಿಯನ್ನು ಹೇಗೆ ಗೌರವಿಸಬೇಕು ಎಂಬ ಕಿಂಚಿತ್ತೂ ಆಲೋಚನೆ, ಸೌಜನ್ಯ ಕಾಂಗ್ರೆಸ್ ನಾಯಕರಿಗೆ ಇಲ್ಲ. ತೀರಾ ಉಡಾಫೇ ಮಾತನಾಡುತ್ತಾರೆ. ಇವರ ಹೇಳಿಕೆಗಳಿಗೆ ಯುವ ಪಡೆಯೇ ಉತ್ತರ ಕೊಡವ ಕಾಲ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read