BIG NEWS: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ: ಇದು ಸರ್ಕಾರದ ಮುಠ್ಠಾಳತನ; ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಸ್ನಿಸಿ’ ಎಂದು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಠ್ಠಾಳತನವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಯಲ್ಲಿನ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ನ ತುಷ್ಟೀಕರಣದ ಪರಮಾವಧಿ ಎಂದು ಗುಡುಗಿದರು.

ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯವನ್ನು ತಿದ್ದುಪಡಿ ಮಾಡುವ ಮೂಲಕ ಕುವೆಂಪು ಅವರಿಗೂ ಸರ್ಕಾರ ಅವಮಾನ ಮಾಡಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ದೃಷ್ಟಿಯಲ್ಲಿ ಕುವೆಂಪು ಜಾತ್ಯಾತೀತರಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಪ್ರತಿಬಿಂಬಿಸುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಪರಾಕಾಷ್ಠೆ ತಲುಪಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read