HomeKarnatakaBIG NEWS: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ರಾಜಕೀಯ ವೈಷಮ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

BIG NEWS: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ರಾಜಕೀಯ ವೈಷಮ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ವಾರಂಟ್ ಜಾರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದು ರಾಜಕೀಯ ವೈಷಮ್ಯ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೇ ಆಡಳಿತ ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರುದಾರ ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ದುರುದ್ದೇಶದಿಂದ ದೂರು ನೀಡಿದ್ದಾಳೆ. ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೂ 60ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲಿಸಿದ್ದಾಳೆ ಎಂದು ಖುದ್ದು ಗೃಹಮಂತ್ರಿಗಳೇ ಈ ಹಿಂದೆ ಹೇಳಿದ್ದರು. ಈಗ ನಿಮ್ಮ ದುರಾಡಳಿತ ಮರೆಮಾಚಲು 81 ವರ್ಷದ ಬಿಜೆಪಿ ವರಿಷ್ಠ ಬಿ.ಎಸ್.ಯಡಿಯೂರಪ್ಪ ವಿರುದ್ಧ ಇಲ್ಲಸಲ್ಲದ ಪ್ರಕರಣ ಎಳೆಯುತ್ತಿರುವುದು ರಾಜಕೀಯ ವೈಷಮ್ಯವಷ್ಟೇ. ನಿಮ್ಮ ಈ ದುರ್ಬುದ್ಧಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ ಎಂದು ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular