BIG NEWS: ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಅಂತೂ ಎಚ್ಚೆತ್ತ ಸಿಎಂ; ಇನ್ನಾದರೂ ಕೇಂದ್ರದತ್ತ ಬೆರಳು ತೋರುವುದನ್ನು ಬಿಡಲಿ: ಪ್ರಹ್ಲಾದ್ ಜೋಶಿ ಟಾಂಗ್

ಹುಬ್ಬಳ್ಳಿ: ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ರೈತರ ವಿಚಾರದಲ್ಲಿ ಸಿಎಂ ಸ್ವಲ್ಪ ತಡವಾಗಿ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಂಡಿದ್ದಾರೆ. ಅಂತೂ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆಂದು ಜೋಶಿ ಹೇಳಿದ್ದಾರೆ.

ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ NCCF ಮತ್ತು NAFED ಜತೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆಯುವ ಬುದ್ಧಿ ಈಗಲಾದರೂ ಬಂದಿತಲ್ಲ. ಇಷ್ಟು ದಿನ ಪ್ರತಿಯೊಂದಕ್ಕೂ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದ ಸಿಎಂಗೆ ಈಗ ಜ್ಞಾನೋದಯವಾಗಿದೆ. ಎಥೆನಾಲ್ ಉತ್ಪಾದನೆಗಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಿಕೊಳ್ಳಲು NCCF ಮತ್ತು NAFED ನೊಂದಿಗೆ ಒಪ್ಪಂದ ಮಾಡಿಕೊಳ್ಳತಕ್ಕದ್ದೆಂದು ಸಿಎಂ ಇದೀಗ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರ ಹೊಣೆಗಾರಿಕೆ ಮರೆತ ಬಗ್ಗೆ ನಿನ್ನೆ ತಾನೇ ಮಾಧ್ಯಮಗಳೆದುರು ಪ್ರಸ್ತಾಪಿಸಿದ್ದೆ. ಮೆಕ್ಕೆಜೋಳ ಖರೀದಿ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು (SOP) ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿತ್ತು. ಕೆಟ್ಟ ಮೇಲೆ ಬುದ್ಧಿ ಬಂತು ಎನ್ನುವಂತೆ ರಾಜ್ಯ ಸರ್ಕಾರಕ್ಕೆ ಇದೀಗ ಬುದ್ಧಿ ಬಂದಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇನ್ನಾದರೂ ರೈತರಲ್ಲಿ ಇಲ್ಲ ಸಲ್ಲದ ಗೊಂದಲ ಸೃಷ್ಟಿಸುವುದನ್ನು ಬಿಡಲಿ. ತಮ್ಮ ಸರ್ಕಾರದ ಆಡಳಿತ ವೈಫಲ್ಯ ಮರೆಮಾಚುವುದಕ್ಕಾಗಿ ಕೇಂದ್ರ ಸರ್ಕಾರದತ್ತ ಬೆರಳು ತೋರುವುದನ್ನು ಇಲ್ಲಿಗೇ ನಿಲ್ಲಿಸಲಿ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read