BIG NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜ್ಯವನ್ನು ಪಾಕಿಸ್ತಾನ ಮಾಡಿದ್ದಾರೆ; ಪ್ರಹ್ಲಾದ್ ಜೋಶಿ ಗಂಭೀರ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣೆ ಮಾಡಿದವರ ಮೇಲೆ ಎಫ್ ಐ ಆರ್ ದಾಖಲಿಸಲಾಗುತ್ತಿದೆ. ಇದು ತುಷ್ಠೀಕರಣದ ಪರಾಕಾಷ್ಠೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಹನುಮಾನ್ ಚಾಲೀಸ ಹಾಕಿದ್ದಕ್ಕೆ ಸರ್ಕಾರ ಎಫ್ ಐ ಆರ್ ದಾಖಲಿಸಿದೆ. ಯಾರು ಬೇಕಾದರೂ 6 ಗಂಟೆಗೆ ಎದ್ದು ನಮಾಜ್ ಮಾಡಬಹುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ತಾನ ಮಾಡಿದ್ದಾರೆ. ಇವರು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದಾರಾ? ಅಥವಾ ಇದನ್ನು ಇಸ್ಲಾಮಿಕ್ ರಾಷ್ಟ್ರ ಅಂದುಕೊಂಡಿದ್ದಾರಾ? ಸರ್ಕಾರದ ಈ ನಡೆಯನ್ನು ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ನನ್ನ ಮಕ್ಕಳು ರಾಹುಲ್ ಗಾಂಧಿ ತರಹ ಆಗಬೇಕು ಎಂದಿರುವ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಹಾಗೆ ಹೇಳದೇ ಹೋದರೆ ಅವರ ನೌಕರಿ ಹೋಗುತ್ತದೆ. ಕಾಂಗ್ರೆಸ್ ನವರು 75 ವರ್ಷಗಳ ಕಾಲ ಸುಳ್ಳನ್ನೇ ಹೇಳಿದ್ದಾರೆ. ಇಗಲೂ ಸುಳ್ಳುನ್ನೇ ಹೇಳುತ್ತಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read