ಧಾರವಾಡ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.
ಧಾರವಾಡದ ಹೆಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ವಿಜಯೇಂದ್ರ, ವಿ.ಸೋಮಣ್ಣ ನಾವೇ ಅಧ್ಯಕ್ಷರಾಗುತ್ತೇವೆ ಎಂದು ಹೇಳಿಲ್ಲ. ಯಾರನ್ನೇ ಮಾಡಬೇಕು ಎಂದರೂ ರಾಷ್ಟ್ರೀಯ ನಾಯಕರೇ ತೀರ್ಮಾನಿಸುತ್ತಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಎಲ್ಲಾ ರಾಜ್ಯಗಳಲ್ಲಿಯೂ ನಡೆಯುತ್ತಿದೆ. ಅದರಂತೆ ನಮ್ಮ ರಾಜ್ಯದಲ್ಲಿಯು ನಡೆಯಲಿದೆ ಎಂದರು. ವಿ.ಸೋಮಣ್ಣ ಏನು ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ರಾಷ್ಟ್ರೀಯ ನಾಯಕರು ವಿಚಾರ ಮಾಡುತ್ತಾರೆ. ಈ ಬಾರಿ ನಾಮಿನೇಟ್ ಮಾಡಲ್ಲ. ಸರ್ವಾನುಮತದಿಂದ ಆಯ್ಕೆ ನಡೆಯಲಿದೆ ಎಂದು ಹೇಳಿದರು.