BIG NEWS: 3 ರಾಜ್ಯಗಳಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ

ಹುಬ್ಬಳ್ಳಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಬಹುಮತಗಳಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ರಾಜಸ್ಥಾನ, ಛತ್ತೀಸ್ ಗಢ, ಮಧ್ಯಪ್ರದೇಶ ಮಾಹಿತಿ ಪಡೆದುಕೊಂಡಿದ್ದೇನೆ. ನಾನು ರಾಜಸ್ಥಾನದ ಚುನಾವಣೆಯ ಉಸ್ತುವಾರಿ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ಪೂರ್ತಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯನವರು ಪಕ್ಷದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬುದರ ಹಿಂದೆ ಸಿಎಂ ಇದ್ದಾರೆ. ರಾಜ್ಯದಲ್ಲಿ ಆಡಳಿತ ಪಕ್ಷ ಅಧೋಗತಿಗೆ ತಲುಪಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read