BIG NEWS: ಕಾಂಗ್ರೆಸ್ ನಲ್ಲಿ ಒಳಜಗಳ ಜಾಸ್ತಿಯಾಗಿದೆ; ಸರ್ಕಾರ ಕಂಟ್ರೋಲ್ ಕಳೆದುಕೊಂಡಿದೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಮಂತ್ರಿ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಗೊತ್ತಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಬಿ.ಕೆ.ಹರಿಪ್ರಸಾದ್ ವಿರುದ್ಧ ಕಾಂಗ್ರೆಸ್ ನಲ್ಲಿ ಮಸಲತ್ತು ಮಾಡುತ್ತಿದ್ದಾರೆ. ಮಸಲತ್ತು ಮಾಡುವವರ ವಿರುದ್ಧ ಹರಿಪ್ರಸಾದ್ ಮಾತನಾಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರನ್ನು ಈಡಿಗ ಸಮಾಜ ಗುರುತಿಸಿದೆ. ಅದರ ವಿರುದ್ಧ ಸಿದ್ದರಾಮಯ್ಯ ಸಮಾವೇಶ ಮಾಡುತ್ತಿದ್ದಾರೆ. ಅವರು ಎಷ್ಟು ಪುಟೀತಾರೆ ನೋಡಿ ಮುಂದೆ ಮಾತಾಡೋಣ ಎಂದರು.

ಸರ್ಕಾರದಲ್ಲಿ ಜಗಳ, ಪರಸ್ಪರ ಕೆಸರೆರಚಾಟ ಹೆಚ್ಚಾಗಿದೆ. ಇದರಿಂದ ಆಡಳಿತದ ಮೇಲೆ ಪರಿಣಾಮ ಬೀರಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿರುವ ಅಕ್ಕಿ ಬಿಟ್ಟು ಒಂದು ಕಾಳಿ ಅಕ್ಕಿಯನ್ನು ಕೂಡ ರಾಜ್ಯ ಸರ್ಕಾರ ಕೊಟ್ಟಿಲ್ಲ. ಸರ್ಕಾರ ವಿದ್ಯುತ್ ಕೂಡ ಕೊಡುತ್ತಿಲ್ಲ ಎಂದು ರೈತರೇ ಹೇಳುತ್ತಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಸರಿಕಾರ ಕಂಟ್ರೋಲ್ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read