HomeKarnatakaBIG NEWS: ಅಸಮಾಧಾನ ಏನೇ ಇರಲಿ, ಬಹಿರಂಗ ಚರ್ಚೆ ಮಾಡಿದ್ದು ಸರಿಯಲ್ಲ; ವಿ.ಸೋಮಣ್ಣ ನಡೆಗೆ ಗರಂ...

BIG NEWS: ಅಸಮಾಧಾನ ಏನೇ ಇರಲಿ, ಬಹಿರಂಗ ಚರ್ಚೆ ಮಾಡಿದ್ದು ಸರಿಯಲ್ಲ; ವಿ.ಸೋಮಣ್ಣ ನಡೆಗೆ ಗರಂ ಆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ


ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಎರಡೂ ಕ್ಷೇತ್ರಗಳಲ್ಲಿ ಹೀನಾಯ ಸೋಲನುಭವಿಸಿದ ಆಘಾತದಿಂದ ಹೊರಬರದ ಮಾಜಿ ಸಚಿವ ವಿ.ಸೋಮಣ್ಣ, ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಸಿದ್ದಗಂಗಾ ಶ್ರೀಗಳ ಬಳಿ ಅಳಲು ತೋಡಿಕೊಂಡಿದ್ದಾರೆ.

ಮಾಜಿ ಸಚಿವ ವಿ.ಸೋಮಣ್ಣ ನಡೆಗೆ ಗರಂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅತೃಪ್ತಿ ಏನೇ ಇರಲಿ, ಆದ್ರೆ ಬಹಿರಂಗವಾಗಿ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಮಾತ್ರವಲ್ಲ ಎಲ್ಲರಿಗೂ ಹೇಳುತ್ತಿದ್ದೇನೆ. ನಿಮ್ಮ ಕುಂದುಕೊರತೆ ಎನೇ ಇರಲಿ ಗಮನಕ್ಕೆ ತನ್ನಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಗಮನಕ್ಕೆ ತನ್ನಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿ.ಸೋಮಣ್ಣ ನನಗೂ ಆತ್ಮೀಯರು. ನಾನು ಅವರ ಬಳಿ ಮತ್ತೊಮ್ಮೆ ಮಾತನಾಡುತ್ತೇನೆ. ಬಹಿರಂಗವಾಗಿ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular