HomeKarnatakaBIG NEWS: ಸಿದ್ದರಾಮಯ್ಯ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದಿಢೀರ್ ಅನುಕಂಪ ಬಂದಿದ್ದೇಕೆ?

BIG NEWS: ಸಿದ್ದರಾಮಯ್ಯ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದಿಢೀರ್ ಅನುಕಂಪ ಬಂದಿದ್ದೇಕೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರಿನಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಪಕ್ಷ ನೆಪಕ್ಕಷ್ಟೇ ಒಬಿಸಿ ಜಪ ಮಾಡುತ್ತದೆ. ಆದರೆ, ನಡೆದುಕೊಳ್ಳುವ ರೀತಿಯೇ ಬೇರೆ. ಒಬಿಸಿ ವರ್ಗದವರನ್ನು ಯಾವತ್ತೂ ಕಡೆಗಣಿಸುತ್ತಲೇ ಇದೆ ಎಂದರು.

ಅಪ್ಪ ರಾಜೀವ್ ಗಾಂಧಿ ಅಂದು ವೀರೇಂದ್ರ ಪಾಟೀಲರನ್ನು ನಡೆಸಿಕೊಂಡಂತೆ ಮಗ ರಾಹುಲ್ ಗಾಂಧಿ ಇಂದು ಸಿದ್ದರಾಮಯ್ಯ ಅವರನ್ನು ನಡೆಸಿಕೊಂಡಿದ್ದಾರೆ. ರಾಜೀವ್ ಗಾಂಧಿ ವೀರೇಂದ್ರ ಪಾಟೀಲರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅಪಮಾನಿಸಿದ್ದರು. ಅಂತೆಯೇ ಮಗ ರಾಹುಲ್ ಗಾಂಧಿ ಸಹ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಅವಮಾನಿಸಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರಹ್ಲಾದ್ ಜೋಶಿ ಅವರ ಈ ಅನುಕಂಪ, ಆಕ್ರೋಶದ ಮಾತುಗಳಿಗೆ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ತಿಂಗಳುಗಳ ಹಿಂದೆ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯನವರ ಬಗ್ಗೆ ಏನೆಲ್ಲ ಮಾತನಾಡಿದ್ದರು, ಯಾವ ರೀತಿ ಸಂಬೋದನೆ ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗ ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಅವರ ಮೇಲೆ ಅನುಕಂಪ, ಕರುಣೆ ತೋರಿಸುತ್ತಿರುವುದು ಕೇವಲ ರಾಜಕೀಯ ದುರುದ್ದೇಶಕ್ಕೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರನ್ನು ಯಾವುದೇ ರೀತಿ ಕೆಟ್ಟದಾಗಿ ಬಳಸಿಕೊಂಡಿಲ್ಲ. ರಾಜೀನಾಮೆ ವಿಚಾರ ಕಳೆದ ಆರು ತಿಂಗಳಿಂದ ನಡೆಯುತ್ತಿದ್ದ ಚರ್ಚೆ. ಸಿದ್ದರಾಮಯ್ಯನವರು ಕೂಡ ಪದೇ ಪಡೆ ಹೇಳುತ್ತಿದ್ದರು. ರಾಹುಲ್ ಗಾಂಧಿ ಏನು ಸೂಚನೆ ಕೊಡುತ್ತಾರೆ ಅದರಂತೆ ನಾಅನು ನಡೆದುಕೊಳ್ಳುತ್ತೇನೆ ಎಂದಿದ್ದರು. ಅದೇರೀತಿ ಹೈಕಮಾಂಡ್ ಸೂಚನೆ ಬರ್ಉತ್ತಿದ್ದಂತೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರ ನಿರೀಕ್ಷೆಯಂತೆ ಆಗಿಲ್ಲ ಎಂಬ ಕಾರಣಕ್ಕೆ ಇಂತಹ ಆರೋಪಗಳನ್ನು ಜೋಶಿ ಅವರು ಮಾಡುವುದು ಸರಿಯಲ್ಲ ಎಂದರು.

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ವರಿಷ್ಠರು ಹಾಗೂ ನಾಯಕರು ಅವರ ಮೇಲೆ ಯಾವ ರೀತಿ ಒತ್ತಡ ಹೇರಿದ್ದರು. ಯಡಿಯೂರಪ್ಪನವರು ಕಣ್ಣೀರು ಹಾಕಿದ್ದರು. ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು. ಸಿದ್ದರಾಮಯ್ಯನವರಿಗೆ ಅಂತಹ ಯಾವುದೇ ಒತ್ತಡವಿರಲಿಲ್ಲ. ಅವರಿಗೆ ಆ ರೀತಿ ಮಾಡಿಯೂ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಗೆ ಏನು ಮಾತುಕೊಟ್ಟಿದರು ಅದರಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular