HomeKarnatakaಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು ಎಸ್ಐಟಿ ಸೂಚನೆ

ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು ಎಸ್ಐಟಿ ಸೂಚನೆ

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಪತ್ತೆ ಮಾಡಿದ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯರಿಗೆ ದೂರು ನೀಡಲು ಸೂಚನೆ ನೀಡಿದ್ದಾರೆ. ಇವರು ದೂರು ನೀಡಿದಲ್ಲಿ ಪ್ರಜ್ವಲ್ ಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ.

ಲೈಂಗಿಕ ದೌರ್ಜನ್ಯದ ವಿಡಿಯೋಗಳು ಮತ್ತು ಅಶ್ಲೀಲ ಫೋಟೋಗಳ ಪರಿಶೀಲನೆಯ ಸಂದರ್ಭದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾಗಿದೆ. ಇವರನ್ನು ಸಂಪರ್ಕಿಸಿದ ಎಸ್ಐಟಿ ಅಧಿಕಾರಿಗಳು ದೂರು ನೀಡಲು ಸೂಚಿಸಿದ್ದಾರೆ. ಅಶ್ಲೀಲ ವಿಡಿಯೋಗಳು ಮತ್ತು ಫೋಟೋಗಳಲ್ಲಿರುವ ಮಹಿಳೆಯರನ್ನು ಗುರುತಿಸಿ ದೂರು ನೀಡುವಂತೆ ಮನವೊಲಿಸುವ ಕಾರ್ಯದಲ್ಲಿ ಎಸ್ಐಟಿ ತೊಡಗಿದೆ.

ಮರ್ಯಾದೆಗೆ ಅಂಜಿ ಕೆಲವು ಮಹಿಳೆಯರು ದೂರು ನೀಡಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ. ಅವರ ಮನವೊಲಿಸಲು ಎಸ್ಐಟಿ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular