ಅಶ್ಲೀಲ ದೃಶ್ಯ ಚಿತ್ರೀಕರಿಸಿದ್ದ ಪ್ರಜ್ವಲ್ ಫೋನ್ ವಶಕ್ಕೆ: ವೇಗ ಪಡೆದ ಎಸ್ಐಟಿ ತನಿಖೆ: ಸಹಾಯ ಮಾಡಿದವರಿಗೂ ಸಂಕಷ್ಟ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಇಂದು ವೈದ್ಯಕೀಯ ತಪಾಸಣೆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೊಳಪಡಿಸಲು ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ ಎಸ್ಐಟಿ ಮನವಿ ಮಾಡಲಿದೆ. ಇಂದಿನಿಂದ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆಯನ್ನು ಎಸ್ಐಟಿ ನಡೆಸಲಿದೆ. ಇದರೊಂದಿಗೆ ಎಸ್ಐಟಿ ತನಿಖೆ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಮೂರು ಪ್ರಕರಣಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಅಶ್ಲೀಲ ವಿಡಿಯೋ ಚಿತ್ರೀಕರಣ, ವೈರಲ್ ಆಗಿದ್ದು, ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್ ಫೋನ್ ನಿಮ್ಮದೇನಾ? ನಿಮ್ಮ ಮೊಬೈಲ್ ಫೋನ್ ಯಾರಾದರೂ ತೆಗೆದುಕೊಂಡಿದ್ದರೆ? ದೇಶ ಬಿಟ್ಟ ದಿನದಿಂದ ವಾಪಸ್ ಬರುವವರೆಗೂ ಯಾರು ನೆರವಾಗಿದ್ದರು ಎಂಬುದರ ಬಗ್ಗೆ ಪ್ರಜ್ವಲ್ ವಿಚಾರಣೆ ನಡೆಸಿ ಎಸ್ಐಟಿ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳಲಿದ್ದಾರೆ. ವಿದೇಶಕ್ಕೆ ಹೋಗಲು ಮತ್ತು ವಾಪಸ್ ಬರಲು, ಇಷ್ಟು ದಿನ ಇರಲು ನೆರವಾದವರು ಯಾರು ಎಂಬುದರ ಬಗ್ಗೆಯೂ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಬಳಿ ಇದ್ದ ವಸ್ತುಗಳನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ಸೀಜ್ ಮಾಡಲಾಗಿದ್ದು, ಅವುಗಳನ್ನು ತನಿಖೆಗಾಗಿ ಎಫ್ಎಸ್ಎಲ್ ಗೆ ಕಳುಹಿಸಲಾಗುವುದು. ಹಾಸನ ಸಂಸದರ ನಿವಾಸ, ತೋಟದ ಮನೆ ಸೇರಿ ಹಲವು ಕಡೆ ಮಹಜರು ನಡೆಸಲಾಗುವುದು. ಇಂದು ಕಸ್ಟಡಿಯಲ್ಲಿಯೇ ಪ್ರಾಥಮಿಕ ವಿಚಾರಣೆ ನಡೆಸಲಿದ್ದು, ಮುಂದಿನ ದಿನಗಳಲ್ಲಿ ಕೃತ್ಯ ನಡೆದ ಸ್ಥಳಗಳಲ್ಲಿ ಮಹಜರು ನಡೆಸಲಾಗುತ್ತದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read