BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬ ಇಬ್ಬರು ಆರೋಪಿಗಳನ್ನು ಎಸ್ಐಟಿ ಪೊಲೀಸರ ತಂಡ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಗಿರಿಗೌಡ ಅವರ ಮುಂದೆ ಹಾಜರುಪಡಿಸಿದ ವೇಳೆ ಮೇ 25 ರ ವರೆಗೆ ಅಂದರೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಗಿರಿಗೌಡ ಅವರ ಮುಂದೆ ಹಾಜರುಪಡಿಸಿದ ವೇಳೆ ಮೇ 25 ರ ವರೆಗೆ ಅಂದರೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಎಸ್ಐಟಿ ತಂಡ, ಆರೋಗ್ಯ ತಪಾಸಣೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಆರೋಪಿಗಳ ಪೈಕಿ ಒಬ್ಬನಾದ ಲಿಖಿತ್ ತಂದೆ ಪ್ರಕಾಶ್, ಧೈರ್ಯವಾಗಿರು. ಪ್ರಪಂಚದಲ್ಲಿ ಆಗಬಾರದೇನು ಆಗಿಲ್ಲ. ನೀನೇನು ಹೆದರಬೇಡ ಎಂದು ಮಗನಿಗೆ ಧೈರ್ಯ ಹೇಳಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read