HomeKarnatakaಹೆಚ್.ಡಿ. ರೇವಣ್ಣಗೆ ಜಾಮೀನು ಹಿನ್ನಲೆ ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ: ಕೋರ್ಟ್ ಗೆ ಶರಣಾಗುವ ಸಾಧ್ಯತೆ

ಹೆಚ್.ಡಿ. ರೇವಣ್ಣಗೆ ಜಾಮೀನು ಹಿನ್ನಲೆ ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ: ಕೋರ್ಟ್ ಗೆ ಶರಣಾಗುವ ಸಾಧ್ಯತೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 16 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ತಮ್ಮ ತಂದೆ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಮೇ 15ರಂದು ಜರ್ಮನಿಯ ಮ್ಯೂನಿಚ್ ನಗರದಿಂದ ಪ್ರಯಾಣ ಬೆಳೆಸಲಿದ್ದಾರೆ. ಅವರು ಮೇ 16ರಂದು ಬೆಂಗಳೂರಿಗೆ ಆಗಮಿಸಿ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಲೇ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ ಎನ್ನಲಾಗಿದೆ. ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಹರಿಯಾಣದ ಅಕಲ್ ಟ್ರಾವೆಲ್ಸ್ ನಿಂದ ಪ್ರಜ್ವಲ್ ಗೆ ಟಿಕೆಟ್ ಬುಕಿಂಗ್ ಮಾಡಲಾಗಿದೆ. ಬ್ಯುಸಿನೆಸ್ ಕ್ಲಾಸ್ ನಲ್ಲಿ ಅವರ ಟಿಕೆಟ್ ಬುಕ್ ಆಗಿದ್ದು, ಮೇ 16 ರಂದು ಮಧ್ಯರಾತ್ರಿ 12:30 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಲ್ಯಾಂಡ್ ಆಗುವ ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular