ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ; ಬೆಂಗಳೂರಿನ ರೇವಣ್ಣ ನಿವಾಸದಲ್ಲಿ ಎಸ್ಐಟಿ ಸ್ಥಳ ಮಹಜರು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹೇಳಿಕೆ ಆಧರಿಸಿ ಎಸ್ಐಟಿ ಅಧಿಕಾರಿಗಳು ಶಾಸಕ ಹೆಚ್.ಡಿ.ರೇವಣ್ಣ ಅವರ ಬೆಂಗಳೂರು ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸಕ್ಕೆ ಸಂತ್ರಸ್ತೆ ಜೊತೆ ಆಗಮಿಸಿರುವ ಎಸ್ಐಟಿ ಅಧಿಕಾರಿಗಳ ತಂಡ ಸ್ಥಳ ಮಹಜರು ನಡೆಸಿದೆ.

ಆರಂಭದಲ್ಲಿ ಹಾಸನದ ಎಂಪಿ ಕ್ವಾಟರ್ಸ್ ನಲ್ಲಿನ ಸಂಸದರ ನಿವಾಸದಲ್ಲಿ ರೇಪ್ ಆಗಿದ್ದಾಗಿ ಸಂತ್ರಸ್ತೆ ದೂರು ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರ ಎದುರು ಬೆಂಗಳೂರಿನ ಬಸವನಗುಡಿಯಲ್ಲಿ ರೇವಣ್ಣ ನಿವಾಸದಲ್ಲಿಯೂ ಅತ್ಯಾಚಾರವೆಸಗಲಾಗಿದೆ ಎಂದು ಹೇಳಿಕೆ ನೀಡಿದ್ದರು.

ಸಿಆರ್ ಪಿಸಿ ಸೆಕ್ಷ 164ರ ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read