HomeKarnatakaಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮನೆ ಕೆಲಸಕ್ಕೆ ಇದ್ದ ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕು ಮಹಿಳೆಯ ಮೇಲೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಹಿರಿಯ ವಯಸ್ಸಿನ ಮಹಿಳೆ ಬೇಡ ಬಿಟ್ಟು ಬಿಡಿ ಎಂದರೂ ಕೇಳದೆ ಪ್ರಜ್ವಲ್ ಅತ್ಯಾಚಾರ ಎಸಗೆ ಚಿತ್ರಿಕರಿಸಿಕೊಂಡಿದ್ದಾರೆ ಎಂದು ಎಸ್ಐಟಿ ವತಿಯಿಂದ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಈಗಾಗಲೇ ಪ್ರಜ್ವಲ್ ವಿರುದ್ಧ ಮೊದಲ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಅವರ ವಿರುದ್ಧ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ಆರೋಪ ಪಟ್ಟಿ ಸಲ್ಲಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ 1652 ಪುಟಗಳ ಆರೋಪ ಪಟ್ಟಿಯನ್ನು ಎಸ್ಐಟಿ ಸಲ್ಲಿಸಿದ್ದು, ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೃತ್ಯ ರುಜುವಾತಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular