HomeKarnatakaಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್‌, ಪೆನ್ ಡ್ರೈವ್ ಪತ್ತೆ ಪ್ರಕರಣ: ಮತ್ತೊಂದು FIR ದಾಖಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್‌, ಪೆನ್ ಡ್ರೈವ್ ಪತ್ತೆ ಪ್ರಕರಣ: ಮತ್ತೊಂದು FIR ದಾಖಲು

ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಫೋನ್, ಪೆನ್ಸ್ ಡ್ರೈವ್ ಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್‌ಗಳು ಮತ್ತು ಪೆನ್ ಡ್ರೈವ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 11ರ ರಾತ್ರಿ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದರು. ಸಿಸಿಬಿ ದಾಳಿಯ ನಂತರ ಜೈಲು ಅಧಿಕಾರಿಗಳು ಕೂಡ ಮತ್ತೊಂದು ದಾಳಿ ನಡೆಸಿದ್ದರು. ಈ ಎರಡು ದಾಳಿಗಳ ವೇಳೆ ಜೈಲಿನ ಆವರಣದಲ್ಲಿ ಎರಡು ಮೊಬೈಲ್ ಫೋನ್‌ಗಳು ಮತ್ತು 32 GB ಸಾಮರ್ಥ್ಯದ ಒಂದು ಪೆನ್ ಡ್ರೈವ್ ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈಲಿನ ಆವರಣದಲ್ಲಿ ಅಕ್ರಮ ವಸ್ತುಗಳು ಪತ್ತೆಯಾದ ಬಗ್ಗೆ ಕಾರಾಗೃಹದ ಪ್ರಭಾರ ಅಧೀಕ್ಷಕರು ನೀಡಿದ ದೂರಿನ ಅನ್ವಯ ಹೊಸ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಎಫ್‌ಐಆರ್ ದಾಖಲಾಗಿದ್ದು, ಇದು ಎರಡನೇ ಎಫ್‌ಐಆರ್ ಆಗಿದೆ. ಈ ಘಟನೆ ಜೈಲುಗಳಲ್ಲಿನ ಭದ್ರತಾ ಲೋಪಗಳು ಮತ್ತು ಅಕ್ರಮ ಚಟುವಟಿಕೆಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular