HomeKarnatakaBIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ...

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನ ಸಂಸದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಮೊದಲ ಪತ್ರಕ್ಕೆ ಯಾವುದೇ ಸ್ಪಂದನೆ ಬಾರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಒತ್ತಾಯಿಸಿದ್ದಾರೆ.

ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ, ಎಸ್ಐಟಿ ನೋಟಿಸ್ ಗೂ ಸ್ಪಂದಿಸುತ್ತಿಲ್ಲ. ಈಗಾಗಲೇ ಎರಡು ಬಾರಿ ವಿಮಾನ ಟಿಕೆಟ್ ನ್ನೂ ಕ್ಯಾನ್ಸ್ ಮಾಡಿದ್ದು, ದೇಶಕೆ ವಾಪಾಸ್ ಆಗಲು ಮೀನಾಮೇಷ ಎಣಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡುವಂತೆ ಸಿಎಂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular