BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಮತ್ತೋರ್ವ ಮಹಾ ನಾಯಕನ ಹೆಸರು ಬಹಿರಂಗ ಪಡಿಸಿದ ಆರೋಪಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ನವೀನ್ ಗೌಡ ಪೆನ್ ಡ್ರೈವ್ ಹಿಂದಿನ ಮತ್ತೋರ್ವ ಮಹಾ ನಾಯಕನ ಹೆಸರನ್ನು ಬಹಿರಂಗಪಡಿಸಿದ್ದಾನೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ದಿನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದರು. ಆದರೆ ಇದೀಗ ವಿಡಿಯೋ ವೈರಲ್ ಪ್ರಕರಣದ ಆರೊಪಿ ನವೀನ್ ಗೌಡ, ಜೆಡಿಎಸ್ ಶಾಸಕರೊಬ್ಬರ ವಿರುದ್ಧವೇ ಸ್ಫೋಟಕ ಹೇಳಿಕೆ ನೀಡಿದ್ದಾನೆ.

ನವೀನ್ ಗೌಡ ಎಂಬಾತ ತನ್ನ ಫೇಸ್ ಬುಕ್ ಖಾತೆಯಲ್ಲಿ, ಏಪ್ರಿಲ್ 20ರಂದು ನನಗೆ ರಸ್ತೆಯಲ್ಲಿ ಸಿಕ್ಕ ಪೆನ್ ಡ್ರೈವ್ ನ್ನು ನಾನು ಅರಕಲಗೂಡು ಜೆಡಿಎಸ್ ಶಾಸಕ ಎ.ಮಂಜು ಅವರಿಗೆ ನೀಡಿದ್ದೆ. ಏಪ್ರಿಲ್ 21ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ಶಾಸಕರಿಗೆ ನಾನು ಪೆನ್ ಡ್ರೈವ್ ನೀಡಿದ್ದೆ. ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ ವೈರಲ್ ಹಿಂದೆ ಇರುವ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಬರೆದು ಪೋಸ್ಟ್ ಮಾಡಿದ್ದಾನೆ. ನವೀನ್ ಗೌಡ ಹೆಸರಿನ ಪೇಸ್ ಬುಕ್ ಖಾತೆಯಲ್ಲಿನ ಈ ಪೋಸ್ಟ್ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read