HomeKarnatakaBIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಲಿಖಿತ್ ಗೌಡ ಹಾಗೂ ಚೇತನ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ.

ನ್ಯಾಯಾಂಗ ಬಂಧನದಲ್ಲಿರುವ ಲಿಖಿತ್ ಗೌಡ ಹಾಗೂ ಚೇತನ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹಾಸನದ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಗೌಡ ಹಾಗೂ ಚೇತನ್ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ.12ರಂದು ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular