ಬೆಂಗಳೂರು: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಿದೆ.
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.