ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಗರಿಷ್ಠ ಶಿಕ್ಷೆ ವಿಧಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 10 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಅತ್ಯಾಚಾರದ ಎರಡು ಸೆಕ್ಷನ್ ನಲ್ಲಿ ಪ್ರಜ್ವಲ್ ರೇವಣ್ಣಗೆ 10 ಲಕ್ಷ ದಂಡ ವಿಧಿಸಲಾಗಿದ್ದು, ಸಂತ್ರಸ್ತೆಗೆ ಒಟ್ಟು 11 ಲಕ್ಷ ಪರಿಹಾರದ ರೂಪದಲ್ಲಿ ಪಾವತಿಸಲು ಸೂಚಿಸಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ 14 ತಿಂಗಳ ಜೈಲುವಾಸ ಅನುಭವಿಸಿದ್ದಾರೆ. ಆದರೆ ಈವರೆಗಿನ ಜೈಲು ಶಿಕ್ಷೆ ಮೈನಸ್ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಜೀವಾವಧಿ ಶಿಕ್ಷೆ ಆರಂಭವಾಗಲಿದೆ. ಇಲ್ಲಿನವರೆಗಿನ ಜೈಲುವಾಸ ಮೈಸಲ್ ಆಗುವುದಿಲ್ಲ. ಕಾರಣ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ. ಕೇವಲ ಬಾಡಿ ವಾರೆಂಟ್ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದಿನಿಂದ ಜೈಲು ಶಿಕ್ಷೆಯನ್ನು ಪರಿಗಣಿಸಲಾಗುತ್ತದೆ. ಇನ್ನು ಅಪರಾಧಿಕೆ ತೀರ್ಪಿನ ಪ್ರತಿ ಉಚಿತವಾಗಿ ನೀಡಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಕೆ.ಆರ್.ನಗರ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಜಿವಾವಧಿ ಶಿಕ್ಷೆ ವಿಧಿಸಲಾಗಿದೆ.