HomeKarnatakaBREAKING NEWS: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲು

BREAKING NEWS: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲು

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಈ ವರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಕೇಸ್, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ದಾಖಲಾಗಿತ್ತು. ಆದರೆ ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ ರೇಪ್ ಕೇಸ್ ದಾಖಲಿಸಿದೆ. ಐಪಿಸಿ ಸೆಕ್ಷನ್ 376 (2)(N) ಅಡಿ ಎಸ್ ಐಟಿ ಯಿಂದ ಕೇಸ್ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ನಿನ್ನೆ ಮತ್ತೋರ್ವ ಸಂತ್ರಸ್ತೆ ಎಸ್ ಐಟಿ ಮುಂದೆ ಹಾಜರಾಗಿ ದೂರು ನೀಡಿದ್ದರು. ಸಿಆರ್ ಪಿಸಿ 164 ಅಡಿ ಸಂತ್ರಸ್ತೆ ಹೇಳಿಕೆ ಪಡೆಯಲಾಗಿದೆ. ಸುದೀರ್ಘ 2 ಗಂಟೆಗಳ ಕಾಲ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಿಂದ ದೇಶಕ್ಕೆ ಮರಳುತ್ತಿದ್ದಂತೆ ಬಂಧಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular