HomeKarnatakaBIG NEWS: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್: ಹಾಸನದ ನಿವಾಸದಲ್ಲಿ SITಯಿಂದ ಸ್ಥಳ...

BIG NEWS: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್: ಹಾಸನದ ನಿವಾಸದಲ್ಲಿ SITಯಿಂದ ಸ್ಥಳ ಮಹಜರು

ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ನನ್ನು ಹಾಸನಕ್ಕೆ ಕರೆದೊಯ್ದಿರುವ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣನನ್ನು ಬಾಡಿ ವಾರೆಂಟ್ ಪಡೆದು ಎಸ್ ಐಟಿ ಕಸ್ಟಡಿಗೆ ಪಡೆದುಕೊಂಡಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಹಾಸನಕ್ಕೆ ಪ್ರಜ್ವಲ್ ನನ್ನು ಕರೆದೊಯ್ದಿದ್ದಾರೆ. ಅಲ್ಲದೇ ಹಾಸನದ ಸಂಸದರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ನನ್ನು ವಶಕ್ಕೆ ಪಡೆದು ಸ್ಥಳಮಹಜರು ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular