HomeKarnatakaಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲೇ ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ವಿಡಿಯೋ ಮಾಡಿಕೊಂಡಿದ್ದ ಪ್ರಜ್ವಲ್

ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲೇ ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ವಿಡಿಯೋ ಮಾಡಿಕೊಂಡಿದ್ದ ಪ್ರಜ್ವಲ್

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲಿಯೇ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದರು ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಸಿಐಡಿ ಎಸ್ಐಟಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.

40 ವರ್ಷದ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ ಕೃತ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಟ್ಟುಕೊಂಡಿದ್ದ ಬಗ್ಗೆ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 1,691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಸಂತ್ರಸ್ತೆ ಮೇಲೆ ಬಲವಂತದಿಂದ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ. ಎಂದು ಸಾಕ್ಷ್ಯಾಧಾರಗಳನ್ನು ಲಗತ್ತಿಸಲಾಗಿದೆ. ಸಂತ್ರಸ್ತೆಯ ಹೇಳಿಕೆ, 120 ಸಾಕ್ಷಿದಾರರ ಹೇಳಿಕೆಗಳು, ಡಿಜಿಟಲ್ ಸಾಕ್ಷ್ಯಾಧಾರಗಳನ್ನು ಲಗತ್ತಿಸಲಾಗಿದೆ.

ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮತ್ತೊಂದು ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ. ಶೀಘ್ರವೇ ಆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular