HomeKarnatakaBIG NEWS: ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಬೆನ್ನಲ್ಲೇ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಎಸ್ಐಟಿ...

BIG NEWS: ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಬೆನ್ನಲ್ಲೇ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಎಸ್ಐಟಿ ತನಿಖೆ ಚುರುಕು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಇಂದಿನಿಂದ ವಿಚಾರಣೆಗೆ ಒಳಪಡಿಸಲಾಗುವುದು

ಎಸ್ಐಟಿ ತನಿಖೆ ಇಂದಿನಿಂದ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ಮೂರು ಪ್ರಕರಣಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ತಡರಾತ್ರಿ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ಅವರನ್ನು ಬಂಧಿಸಿ ಎಸ್ಐಟಿ ಕಚೇರಿಗೆ ಕರೆತರಲಾಗಿದೆ.

ಇಂದು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್ಐಟಿ ಪ್ರಕರಣಗಳ ತನಿಖೆಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲಿದೆ. ನ್ಯಾಯಾಲಯ ಕಸ್ಟಡಿಗೆ ನೀಡಿದರೆ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಸಲಾಗುವುದು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular