HomeKarnatakaBREAKING NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು; ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

BREAKING NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು; ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತು ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕರು ಉಪಸ್ಥಿತರಿದ್ದರು. ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ನಿನ್ನೆ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular