HomeKarnatakaBREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಫೋಟೋ, ವಿಡಿಯೋ ಅಪ್ ಲೋಡ್ ಮಾಡಿದ್ದ...

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಫೋಟೋ, ವಿಡಿಯೋ ಅಪ್ ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನರ್ ಅರೆಸ್ಟ್

ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಟ್ರೋಲ್ ಪೇಜ್ ಅಡ್ಮಿನ್ ಪ್ರಜ್ವಲ್ ಬಂಧಿತ ಆರೋಪಿ. ಈತ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದವನು ಎನ್ನಲಾಗಿದೆ. ಆರೋಪಿ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟ್ರೋಲ್ ಪೇಜ್ ಅಡ್ಮಿನರ್ ಪ್ರಜ್ವಲ್, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ, ಫೋಟೋಗಳನ್ನು ಫೇಸ್ ಬುಕ್, ಯೂಟ್ಯೂಬ್, ಇನ್ ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದ. ಅಲ್ಲದೇ ಹಣ ಕೊಟ್ಟರೆ ಲಿಂಕ್ ಕಳುಹಿಸುವುದಾಗಿಯೂ ಹೇಳಿಕೊಂಡಿದ್ದ ಎನ್ನಲಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 67, 67A ಅಡಿ ಕೇಸ್ ದಾಖಲಾಗಿತ್ತು. ಇದೀಗ ಕುದುರೆಮುಖ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular