HomeKarnatakaBREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಎಸ್ಐಟಿ ಮುಂದೆ ಹೇಳಿಕೆ ದಾಖಲಿಸಿದ ಮತ್ತೋರ್ವ...

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಎಸ್ಐಟಿ ಮುಂದೆ ಹೇಳಿಕೆ ದಾಖಲಿಸಿದ ಮತ್ತೋರ್ವ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಸಂತ್ರಸ್ತೆಯರ ನೆರವಿಗಾಗಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದೆ. ಈ ನಡುವೆ ಮತ್ತೋರ್ವ ಸಂತ್ರಸ್ತೆ ಎಸ್ಐಟಿ ಎದುರು ತನ್ನ ಹೇಳಿಕೆ ದಾಖಲಿಸಿದ್ದಾರೆ.

ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ. ಹೊಳೆನರಸಿಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಪ್ರಜ್ವಲ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ತಿಳಿಸಿದ್ದಾರೆ.

ಸಂತ್ರಸ್ತೆ ಹೇಳಿಕೆ ಹಿನ್ನೆಲೆಯಲ್ಲಿ ಎಸ್ಐಟಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಕೃತ್ಯ ನಡೆದ ಸ್ಥಳದಲ್ಲಿ ಮಹಜರು ನಡೆಸಲು ಸಂತ್ರಸ್ತೆಯನ್ನು ಕರೆತರುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular