HomeKarnatakaBREAKING NEWS: ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

BREAKING NEWS: ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿದ್ದರು. ಪ್ರಜ್ವಲ್ ದೇಶಕ್ಕೆ ಆಗಮಿಸುತ್ತಿದ್ದಂತೆ ಬಂಧಿಸುವ ನಿಟ್ಟಿನಲ್ಲಿ ಎಸ್ಐಟಿ ಸಿದ್ಧತೆ ನಡೆಸಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ನಿರೀಕ್ಷಣಾ ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸಿಐಡಿ ಠಾಣೆ ಯಲ್ಲಿ ದಾಖಲಾಗಿರುವ ಕೇಸ್, ಸೈಬರ್ ಕ್ರೈಂ ಹಾಗೂ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸೇರಿ ಮೂರು ಪ್ರಕರಣಗಳಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular