HomeKarnatakaBIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ

ಹಾಸನ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕ್, ನಾನು ಬಿಜೆಪಿ ಮುಖಂಡ ದೇವರಾಜೆಗೌಡಗೆ ಬಿಟ್ಟು ಬೇರೆ ಯಾರಿಗೂ ಪೆನ್ ಡ್ರೈವ್ ನೀಡಿಲ್ಲ. ರೇವಣ್ಣ, ಪ್ರಜ್ವಲ್ ಜೊತೆ ಕಳೆದ 15 ವರ್ಷಗಳಿಂದ ಕೆಲಸ ಮಾಡುತ್ತಿದ್ದೆ. ಕಳೆದ 1 ವರ್ಷದ ಹಿಂದೆ ನಾನು ಕೆಲಸ ಬಿಟ್ಟಿದ್ದೇನೆ. ನನ್ನ ಮೇಲೆ ದೌರ್ಜನ್ಯ ನಡೆಸಿದ್ದು, ನನ್ನ ಜಮೀನು ಬರೆಸಿಕೊಂಡಿದ್ರು. ನನ್ನ ಹೆಂಡತಿ ಮೇಲೆ ಹಲ್ಲೆ ಮಾಡಿದ್ದರು. ಹಾಗಾಗಿ ನಾನು ಕೆಲಸ ಬಿಟ್ಟಿದ್ದೆ. ಅವರ ವಿರುದ್ಧ ಕೇಸ್ ಹಾಕಿ ಹೋರಾಟಕ್ಕೆ ಸಿದ್ಧನಾಗಿದ್ದೆ ಎಂದಿದ್ದಾರೆ.

ಈ ವೇಳೆ ಅವರ ವಿರುದ್ಧ ದೇವರಾಜೇಗೌಡರೂ ಹೋರಾಟಕ್ಕೆ ಯತ್ನಿಸುತ್ತಿರುವುದು ಗೊತ್ತಾಯಿತು. ಆಗ ಅವರ ಬಳಿ ಹೋಗಿ ನನ್ನ ಕಷ್ಟ ಹೇಳಿಕೊಂಡಿದ್ದೆ. ನನಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ದೇವರಾಜೇಗೌಡರು ಕೇಸ್ ತೆಗೆದುಕೊಳ್ಳಲಿಲ್ಲ. ಹಾಗಾಗಿ ನಾನು ಬೇರೆ ಲಾಯರ್ ಮೂಲಕ ಕೇಸ್ ಹಾಕಿದ್ದೆ ಎಂದು ಪ್ರಜ್ವಲ್ ಮಾಜಿ ಕಾರು ಚಾಲಕ ಹೇಳಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular