ಸಿದ್ದರಾಮಯ್ಯ ಮನೆಯಲ್ಲಿ ನಡೆದಿದ್ದ ಘಟನೆಯನ್ನು ದಾಖಲೆ ಸಮೇತ ಹೊರತರುತ್ತೇವೆ; ಮಾಜಿ ಸಿಎಂ ಹೆಚ್.ಡಿ.ಕೆ ಆಕ್ರೋಶ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಆರೋಪಿಸಿರುವ ಮಾಜಿ ಸಿಎಂ, ಸಿದ್ದರಾಮಯ್ಯನವರ ಮನೆಯಲ್ಲಿ ನಡೆದ ವಿಚಾರದ ಬಗ್ಗೆ ಅವರು ಮರೆತು ಹೋದಂತಿದೆ ಎಂದು ಗುಡುಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಕುಟುಂಬದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಲ್ಲಾ ದಾಖಲೆಗಳನ್ನು ನಾವು ಹೊರಗೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನಾಯಿತು ಎಲ್ಲವೂ ಹೊರಗೆ ಬರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಸಿಎಂ ಪುತ್ರ ರಾಕೇಶ್ ಸಿದ್ದರಾಮಯ್ಯ ಸಾವಿನ ವಿಚಾರವನ್ನು ಪರೋಕ್ಷವಾಗಿ ಎಳೆದು ತಂದಿದ್ದಾರೆ.

ಹೆಚ್.ಡಿ.ರೇವಣ್ಣ ಕುಟುಂಬದ ವಿಷಯ ಕೆದಕಿದರೆ ಚರ್ಚೆಗೆ ಸಿದ್ಧ ನಾನು ಪಲಾಯನ ಮಾಡಲ್ಲ. ನಮ್ಮ ಮನೆ ಮುಂದೆ ಯಾಕೆ ಪ್ರತಿಭಟನೆ ಮಾಡುತ್ತೀರಿ? ಇದನ್ನು ಇಲ್ಲಿಗೆ ಸುಮ್ಮನೇ ಬಿಡಲ್ಲ. ಇದೆಲ್ಲದರ ಹಿಂದೆ ಮಹಾನ್ ನಾಯಕರ ಕೈವಾಡವಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read