BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ನಾವೇನೂ ಎಲ್ಲೂ ಓಡಿ ಹೋಗಿಲ್ಲ ಎಂದ ಹೆಚ್.ಡಿ.ರೇವಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೊಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ನಾವೇನೂ ಎಲ್ಲಿಯೂ ಓಡಿ ಹೋಗಿಲ್ಲ. ಇಲ್ಲಿಯೇ ಇದ್ದೇವೆ. ಕಾನೂನು ಪ್ರಕಾರ ಎಲ್ಲವನ್ನೂ ಎದುರಿಸುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ಸರ್ಕಾರ ಅವರದ್ದಿದೆ. ಏನುಬೇಕಾದರೂ ಮಾಡಲಿ. ದೇವೇಗೌಡರ ಫ್ಯಾಮಿಲಿ ಮೇಲೆ ಇದೇ ಮೊದಲೇನಲ್ಲ. ಮೊದಲಿನಿಂದಲೂ ಇಂಥವನ್ನು ಎದುರಿಸಿದ್ದೇವೆ ಎಂದು ಹೇಳಿದರು.

ಕೆಲಸದ ನಿಮಿತ್ತ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಎಸ್ ಐಟಿ ರಚನೆ ಮಾಡಿ ತನಿಖೆ ಮಡುತ್ತಾರೆ ಎಂಬುದು ಗೊತ್ತಿರಲಿಲ್ಲ. ವಿಚಾರಣೆಗೆ ಕರೆದಾಗ ಪ್ರಜ್ವಲ್ ಬರುತ್ತಾರೆ ಎಂದರು.

ಈ ವಿಚಾರವಾಗಿ ಹೆಚ್.ಡಿ.ದೇವೇಗೌಡರ ಜೊತೆ ಚರ್ಚೆ ಮಾಡಿಲ್ಲ. ದೇವೇಗೌಡರ ಕುಟುಂಬದ ಮೇಲೆ ಈ ಹಿಂದಿನಿಂದಲೂ ಇಂತಹ ಆರೋಪವನ್ನು ಮಾಡುತ್ತಿದ್ದಾರೆ. ಕಳೆದ 40 ವರ್ಷಗಳಿಂದ ಇದನ್ನೆಲ್ಲವನ್ನೂ ಎದುರಿಸಿದ್ದೇವೆ. ಈಗಲೂ ಎದುರಿಸುತ್ತೇವೆ. ಹೆದರಿಕೊಂಡು ನಾವೆಲ್ಲೂ ಓಡಿ ಹೋಗಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read