BIG NEWS: ಮಧ್ಯಾಹ್ನ 3ಗಂಟೆಗೆ ಕೆಐಎಗೆ ಆಗಮಿಸಲಿರುವ ಪ್ರಜ್ವಲ್ ರೇವಣ್ಣ; ಏರ್ ಪೋರ್ಟ್ ನಲ್ಲೇ SITಯಿಂದ ಬಂಧನಕ್ಕೆ ಸಿದ್ಧತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಬರಲಿದ್ದು, ದುಬೈನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದ ಬೆನ್ನಲ್ಲೇ ಪ್ರಜ್ವಲ್ ಚಲನವಲನಗಳ ಬಗ್ಗೆ ಎಸ್ಐಟಿಗೆ ಮಾಹಿತಿ ಲಭ್ಯವಾಗಿದೆ. ದುಬೈನ ಅಪಾರ್ಟ್ ಮೆಂಟ್ ಒಂದರಲ್ಲಿ ಪ್ರಜ್ವಲ್ ರೇವಣ್ಣ ಇದ್ದರು. ವಕೀಲರ ಸಲಹೆ ಮೇರೆಗೆ ಭಾರತಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಏರ್ ಪೋರ್ಟ್ ಗೆ ತೆರಳಿದ್ದು, ಪ್ರಜ್ವಲ್ ಬಂಧನಕ್ಕೆ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read