HomeKarnatakaBREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪೋಸ್ಟ್; ಆರೋಪಿ ನವೀನ್ ಗೌಡಗೆ ಎಸ್...

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪೋಸ್ಟ್; ಆರೋಪಿ ನವೀನ್ ಗೌಡಗೆ ಎಸ್ ಐ ಟಿ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪಿ ಪತ್ತೆ ಮಡಿರುವ ಎಸ್ ಐಟಿ ತಂಡ ನೋಟೀಸ್ ನೀಡಿದೆ.

ನವೀನ್ ಗೌಡ ಎಂಬಾತ ತನ್ನ ಸಾಮಾಜಿಕ ಜಾಲತಾಣದ ಫೇಸ್ ಬುಕ್ ಅಕೌಟ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಏಪ್ರಿಲ್ 8ರಂದು ಬೆಳಿಗ್ಗೆ 8 ಗಂಟೆಗೆ ಪೋಸ್ಟ್ ಮಾಡಿದ್ದ. ನವೀನ್ ಗೌಡ್ ಅಕೌಂಟ್ ನಿಂದ ಪೋಸ್ಟ್ ಡಿಲಿಟ್ ಆಗಿದೆ.

ಈ ಹಿನ್ನೆಲೆಯಲ್ಲಿ ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ನವೀನ್ ಗೌಡಗೆ ನೋಟೀಸ್ ಜಾರಿ ಮಾಡಿದ್ದು, ಮೇ 4ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular