BREAKING NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯ ಅತ್ಯಾಪ್ತ ಅರೆಸ್ಟ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತರನ್ನು ಎಸ್ಐಟಿ ಬಂಧಿಸಿದೆ.

ಮಾಜಿ ಶಾಸಕ ಪ್ರೀತಂ ಗೌಡ ಅಯಾಪ್ತ ಲಿಖಿತ್ ಹಾಗೂ ಕಚೇರಿ ಸಿಬ್ಬಂದಿ ಚೇತನ್ ಎಂಬುವವರನ್ನು ಎಸ್ಐಟಿ ಬಂಧಿಸಿದ್ದು, ಇಬ್ಬರನ್ನು ತೀವ್ರ ವಿಚರಣೆಗೆ ಒಳಪಡಿಸಲಾಗಿದೆ.

ಇದೇ ವೇಳೆ ನವೀನ್ ಗೌಡ ಹಾಗೂ ಪುಟ್ಟರಾಜು ಎಂಬುವವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಸನದಲ್ಲಿ ಹರಿದಾಡುತ್ತಿದ್ದಂತೆ ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ತನಿಖೆ ಚುರುಕುಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read