BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ರೇವಣ್ಣ ನಿವಾಸದಲ್ಲಿ ಎಸ್ ಐಟಿ ಅಧಿಕಾರಿಗಳಿಂದ ಸ್ಥಳಮಹಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಎಸ್ ಐಟಿ ಅಧಿಕಾರಿಗಳ ತಂಡ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿರುವ ಶಾಸಕ ಹೆಚ್.ಡಿ.ರೇವಣ್ಣ ನಿವಾಸಕ್ಕೆ ಭೇಟಿ ನೀಡಿದೆ.

5 ವಾರಹನಗಲಲ್ಲಿ ಆಗಮಿಸಿರುಇವ ಎಸ್ ಐಟಿ ಅಧಿಕಾರಿಗಳಿಗೆ ಪೊಲೀಸರು ಸಾಥ್ ನೀಡಿದ್ದಾರೆ. ಸಂತ್ರಸ್ತೆ ಜೊತೆಗೆ ಆಗಮಿಸಿರುವ ಎಸ್ ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ ಸ್ಥಳಮಹಜರು ನಡೆಸಿದ್ದಾರೆ. ಸ್ಥಳ ಮಹಜರು ಬಳಿಕ ಸ್ಥಳದಲ್ಲೇ ಸಂತ್ರಸ್ತ ಮಹಿಳೆಯ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

ಶಾಸಕ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯ ಒಳಗಡೆಯೇ ಇದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳ ಮಹಜರು ಪ್ರಕ್ರಿಯೆಯನ್ನು ಎಸ್ ಐಟಿ ವಿಡಿಯೋ ಮಾಡಿಕೊಳ್ಳುತ್ತಿದೆ. ಸ್ಥಳಮಹಜರು ವೇಳೆ ಸಂತ್ರಸ್ತ ಮಹಿಳೆಯ ಹೇಳಿಕೆ ಅತ್ಯಂತ ಮಹತ್ವದ್ದಾಗಿರಲಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read