HomeKarnatakaBIG NEWS: ಪ್ರಜ್ವಲ್ ರೇವಣ್ಣಗೆ ಸೇರಿದ 3 ತೋಟದ ಮನೆ ಮೇಲೆ SIT ದಾಳಿ

BIG NEWS: ಪ್ರಜ್ವಲ್ ರೇವಣ್ಣಗೆ ಸೇರಿದ 3 ತೋಟದ ಮನೆ ಮೇಲೆ SIT ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಮೂರು ತೋಟದ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಹಾಸನ ಎಸ್ ಐಟಿ ತನಿಖಾಧಿಕಾರಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹೊಳೆನರಸಿಪುರದ ಮೂರು ಮನೆಗಳ ಮೇಲೆ ದಾಳಿ ನಡೆಸಿ ಪರುಶೀಲಿಸಲಾಗಿದೆ.

ಹೊಳೆನರಸಿಪುರದ ಪಡುವಲಿಪ್ಪೆ ತೋಟದ ಮನೆ, ಚನ್ನರಾಯಪಟ್ಟಣದ ಗನ್ನಿಗಡದಲ್ಲಿರುವ ತೋಟದ ಮನೆ ಹಾಗೂ ಕಾಮೇನಹಳ್ಳಿಯ ತೋಟದ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಇನ್ನು ಹೊಳೆನರಸಿಪುರದ ರೇವಣ್ಣ ನಿವಾಸದಲ್ಲಿಯೂ ಪರಿಶೀಲನೆ ನಡೆಸಲು ಎಸ್ ಐಟಿ ಸಿದ್ಧತೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಮನೆಯನ್ನು ಸುಪರ್ದಿಗೆ ಪಡೆಯುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular