HomeKarnatakaBIG NEWS: ಮತ್ತೆ ಟಿಕೆಟ್ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ; ರಾಜ್ಯಕ್ಕೆ ಮರಳಲು ಮೀನಾಮೇಷ ಎಣಿಸುತ್ತಿರುವ...

BIG NEWS: ಮತ್ತೆ ಟಿಕೆಟ್ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ; ರಾಜ್ಯಕ್ಕೆ ಮರಳಲು ಮೀನಾಮೇಷ ಎಣಿಸುತ್ತಿರುವ ಸಂಸದ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ದೇಶಕ್ಕೆ ಆಗಮಿಸಲು ಮೀನಾಮೇಷ ಎಣಿಸುತ್ತಿದ್ದಾರೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲೇ ಕಾಲ ಕಳೆಯುತ್ತಿದ್ದಾರೆ. ಕಳೆದ 17 ದಿನಗಳಿಂದ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ನಡುವೆ ಭಾರತಕ್ಕೆ ಮರಳಲು ಬುಕ್ ಮಾಡಿದ್ದ ಟಿಕೆಟ್ ನ್ನು ಮತ್ತೆ ಕ್ಯಾನ್ಸಲ್ ಮಾಡಿದ್ದಾರೆ. ಇದು ಎಸ್ಐಗೆ ಇನ್ನಷ್ಟು ತಲೆನೋವು ತಂದೊಡ್ಡಿದೆ.

ಮೇ 3ರಂದು ಬುಕ್ ಆಗಿದ್ದ ಟಿಕೆಟ್ ನ್ನು ಪ್ರಜ್ವಲ್ ರೇವಣ್ಣ ಮೇ 15ಕ್ಕೆ ಪೋಸ್ಟ್ ಪೋನ್ ಮಾಡಿದ್ದರು. ಇದೀಗ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ಮೇ 15ರಂದು ಬುಕ್ ಆಗಿದ್ದ ಟಿಕೆಟ್ ನ್ನು ರದ್ದು ಮಾಡಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣ ತಾವಾಗಿಯೇ ದೇಶಕ್ಕೆ ಮರಳುವುದು ಅನುಮಾನವೆನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular